
ಪ್ರಜಾವಾಣಿ ವಾರ್ತೆಕೋಲ್ಕತ್ತ (ಪಿಟಿಐ): ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ಕುರಿತಾಗಿ ಎಲ್ಲಾ ರಾಜಕೀಯ ಪಕ್ಷಗಳು ಮಾತನಾಡುತ್ತವೆಯಾದರೂ, ಚುನಾವಣೆಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ವಿಷಯದಲ್ಲಿ ಅವುಗಳದ್ದು ಜಾಣ ಮೌನ.
ಪಶ್ಚಿಮ ಬಂಗಾಳ ರಾಜ್ಯವನ್ನೇ ಪರಿಗಣಿಸುವುದಾದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡು ವೈರಿ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಹಿಳೆಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಇತರ ಪಕ್ಷಗಳಿಗೆ ಮಾದರಿಯಾಗುವಲ್ಲಿ ವಿಫಲವಾಗಿವೆ.
ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿಯು 11 ಕಡೆಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಿದೆ. ಎಡ ಪಕ್ಷಗಳು ಕೇವಲ ಆರು ಮಹಿಳೆಯರಿಗೆ ಟಿಕೆಟ್ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.