ADVERTISEMENT

ಬಣ್ಣದ ಗಾಜು: ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2012, 19:30 IST
Last Updated 3 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ವಾಹನಗಳ ಗಾಜುಗಳ ಮೇಲಿನ ಸನ್ ಫಿಲ್ಮ್ ತೆಗೆಸಲು ವಿಫಲರಾದಲ್ಲಿ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ವಾಹನಗಳ ಗಾಜುಗಳ ಮೇಲೆ ಅಂಟಿಸಿರುವ ಸನ್ ಫಿಲ್ಮ್ ತೆಗೆಯಲು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಮೂರ್ತಿಗಳಾದ ಬಿ.ಎಸ್.ಚವ್ಹಾಣ್ ಹಾಗೂ ಸ್ವತಂತ್ರ ಕುಮಾರ್ ಅವರನ್ನು ಒಳಗೊಂಡ ಪೀಠವು ಸೂಚಿಸಿದೆ.

`ಈ ಸಂಬಂಧ ರೂಪಿಸಿರುವ ಕಾನೂನನ್ನು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆಯುಕ್ತರು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕಾಗುತ್ತದೆ. ಈ ಹಂತದಲ್ಲಿ ನಾವು ಕ್ರಮ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಇದರಲ್ಲಿ ವಿಫಲರಾದಲ್ಲಿ ನ್ಯಾಯಾಂಗ ನಿಂದನೆ ಕಾಯ್ದೆ ಅಡಿಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ~ ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದ್ದಾರೆ.

 ತಾನು ನೀಡಿದ್ದ ಸೂಚನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತಂದಿಲ್ಲ ಎಂದು ಕಳೆದ ತಿಂಗಳು 22 ರಂದು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.