ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಎರಡು ವಾರ ಮುಂದೂಡಿದ ಸುಪ್ರೀಂ ಕೋರ್ಟ್‌

ಅಪರಾಧ ಸಂಚು ಆರೋಪ

ಏಜೆನ್ಸೀಸ್
Published 23 ಮಾರ್ಚ್ 2017, 10:02 IST
Last Updated 23 ಮಾರ್ಚ್ 2017, 10:02 IST
ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಎರಡು ವಾರ ಮುಂದೂಡಿದ ಸುಪ್ರೀಂ ಕೋರ್ಟ್‌
ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಎರಡು ವಾರ ಮುಂದೂಡಿದ ಸುಪ್ರೀಂ ಕೋರ್ಟ್‌   

ನವದೆಹಲಿ: 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಪರಾಧ ಸಂಚು ಆರೋಪ ಹೊತ್ತಿರುವ ಎಲ್‌.ಕೆ.ಅಡ್ವಾಣಿ, ಎಂಎಂ.ಜೋಷಿ ಹಾಗೂ ಬಿಜೆಪಿಯ ಇತರ ಮುಖಂಡರು ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್‌ ಮತ್ತು ಆರ್‌.ಎಫ್‌.ನಾರಿಮನ್‌ ಅವರಿದ್ದ ನ್ಯಾಯಪೀಠವು ಪ್ರಕರಣದಲ್ಲಿರುವ ಎಲ್ಲ ಪಕ್ಷಗಳು ಏಪ್ರಿಲ್‌ 6ರೊಳಗೆ ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದ್ದು, ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಪರಾಧ ಸಂಚು ಆರೋಪದಿಂದ ಬಿಜೆಪಿ ನಾಯಕರ ವಿರುದ್ಧ ವಿಚಾರಣೆ ಕೈ ಬಿಡುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ADVERTISEMENT

ಮಾರ್ಚ್‌ 6ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ತಾಂತ್ರಿಕ ಕಾರಣ ನೀಡಿ ಪ್ರಕರಣದ 13 ಆರೋಪಿಗಳ ವಿರುದ್ಧದ ಆರೋಪಗಳನ್ನು ಕೈಬಿಟ್ಟಿರುವುದು ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.

ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್‌ 7ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.