ADVERTISEMENT

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ

ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ

ಏಜೆನ್ಸೀಸ್
Published 5 ಡಿಸೆಂಬರ್ 2017, 11:19 IST
Last Updated 5 ಡಿಸೆಂಬರ್ 2017, 11:19 IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ   

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜಿರ್ ಒಳಗೊಂಡ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಈ ನಿರ್ಣಯ ತೆಗೆದುಕೊಂಡಿದೆ.

2019ರಲ್ಲಿ ವಿಚಾರಣೆ ನಡೆಸುವಂತೆ  ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಕೆಲವು ಮುಸ್ಲಿಂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.