ADVERTISEMENT

‌ಬಾಬ್ರಿ ಮಸೀದಿ ಧ್ವಂಸ 25ನೇ ವರ್ಷಾಚರಣೆ: ಭದ್ರತೆ, ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಪಿಟಿಐ
Published 5 ಡಿಸೆಂಬರ್ 2017, 12:01 IST
Last Updated 5 ಡಿಸೆಂಬರ್ 2017, 12:01 IST
‌ಬಾಬ್ರಿ ಮಸೀದಿ ಧ್ವಂಸ 25ನೇ ವರ್ಷಾಚರಣೆ: ಭದ್ರತೆ, ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
‌ಬಾಬ್ರಿ ಮಸೀದಿ ಧ್ವಂಸ 25ನೇ ವರ್ಷಾಚರಣೆ: ಭದ್ರತೆ, ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ   

ನವದೆಹಲಿ: ಬಾಬ್ರಿ ಮಸೀದಿ ಧ್ವಂಸದ 25ನೇ ವರ್ಷಾಚರಣೆ ಅಂಗವಾಗಿ ರಾಷ್ಟ್ರದಲ್ಲಿ ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಭದ್ರತಾ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಎಲ್ಲಾ ರಾಜ್ಯಗಳು ಜಾಗರೂಕರಾಗಿದ್ದು, ಶಾಂತಿ ಕಾಪಾಡಲು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ದೇಶದಲ್ಲಿ ಎಲ್ಲಿಯೂ ಕೋಮು ಗಲಭೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.

ಈ ಸಂಬಂಧ ರಾಜ್ಯಗಳೊಂದಿಗೆ ಮಾತನಾಡಿರುವ ಕೇಂದ್ರ ಗೃಹ ಸಚಿವಾಲಯ, ಸೂಕ್ಷ್ಮ ಪ್ರದೇಶಗಳಲ್ಲಿ ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲು ಹಾಗೂ ಹೆಚ್ಚುವರಿ ಜಾಗೃತಿ ವಹಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಇದರಿಂದ ಶಾಂತಿ ಕದಡಲು ಮಾಡುವ ಯಾವುದೇ ಬಗೆಯ ಯತ್ನವನ್ನು ತಡೆಯಬಹುದು ಎಂದು ಹೇಳಿರುವುದಾಗಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 1992ರ ಡಿ.6ರಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು.

ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಭದ್ರತಾ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.