
ಪ್ರಜಾವಾಣಿ ವಾರ್ತೆಲಖನೌ (ಪಿಟಿಐ): ಸಂಭಲ್ ಕ್ಷೇತ್ರದಲ್ಲಿ ಎಸ್‌ಪಿ ಅಭ್ಯರ್ಥಿ ಇಕ್ಬಾಲ್ ಮಹಮೂದ್ ಅವರು ಜಯ ಗಳಿಸಿದ ಹಿನ್ನೆಲೆಯಲ್ಲಿ, ಬೆಂಬಲಿಗನೊಬ್ಬ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ಬಾಲಕನಿಗೆ ತಗುಲಿ ಆತ ಮೃತಪಟ್ಟಿರುವ ಘಟನೆ ಮಂಗಳವಾರ ಜರುಗಿದೆ. 
12 ವರ್ಷದ ದಾನಿಷ್ ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಪ್ಪಿತಸ್ಥನ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಝಾನ್ಸಿಯಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ಎಸ್‌ಪಿ ಕಾರ್ಯಕರ್ತರು ಮತ್ತು ಟಿ.ವಿ ಛಾಯಾಗ್ರಾಹಕರ ಮಧ್ಯೆ ಘರ್ಷಣೆ ಉಂಟಾಗಿದ್ದು, ಕ್ಯಾಮೆರಾ ಸೇರಿದಂತೆ ಇತರ ವಸ್ತುಗಳಿಗೆ ಹಾನಿಯಾಗಿದೆ. 
 
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.