
ಪ್ರಜಾವಾಣಿ ವಾರ್ತೆಜೌನ್ಪುರ (ಪಿಟಿಐ): ಹನ್ನೆರಡು ವರ್ಷದ ಬಾಲಕಿ ಮೇಲೆ ಇಲ್ಲಿನ ಥಾಣಾಗಡ್ಡಿ ಚೌಕಿಯ ಕಾನ್‌ಸ್ಟೆಬಲ್ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕೆರಕಟ್ ಕೊಟ್ವಾಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪಕ್ಕದ ಮನೆ ಬಾಲಕಿಗೆ ಆಮಿಷವೊಡ್ಡಿ ತನ್ನ ಕೋಣೆಗೆ ಕರೆದೊಯ್ದ ಆರೋಪಿ ಶಂಭು ಶರ್ಮಾ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬಾಲಕಿ ತನ್ನ ಮನೆಯವರಿಗೆ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯ ಪೋಷಕರು ಚೌಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಸೇರಿದಂತೆ ಪೊಲೀಸ್ ಚೌಕಿಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.