ನವದೆಹಲಿ (ಪಿಟಿಐ): ನವದೆಹಲಿ–ಅಜ್ಮೀರ್ ಶತಾಬ್ದಿ ಎಕ್ಸ್‌ಪ್ರೆಸ್ ರೈಲು ರಾಜಸ್ತಾನದ ಮೆಹಂದಿಪುರದ ಬಾಲಾಜಿ ದೇವಸ್ಥಾನದ ಬಳಿಯ ಬಂಡಿ ಕುನಾಯಿ ನಿಲ್ದಾಣದಲ್ಲಿ ನಿಂತು ಮುಂದೆ ಚಲಿಸಲಿದೆ.
ರೈಲ್ವೆ ಇಲಾಖೆಯ ಈ ನಿರ್ಧಾರವನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸ್ವಾಗತಿಸಿದ್ದಾರೆ.
ಬಿಜೆಪಿ ಸಂಸದ ವಿಜಯ್ ಗೋಯಲ್ ಅವರು ಭಾನುವಾರ ಇಲ್ಲಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೈಲ್ವೆ ಇಲಾಖೆಯೊಂದಿಗೆ ಮಾತನಾಡಿ ಹೆಚ್ಚಿನ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಕೇಳುವುದು ಕಷ್ಟದ ಕೆಲಸ. ವಿಜಯ್ ಅವರು ಈ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.