ADVERTISEMENT

ಬಿಎಸ್‌ಎಫ್ ಯೋಧನಿಂದ ಮೇಲಧಿಕಾರಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ಗುವಾಹಟಿ (ಪಿಟಿಐ): ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನೊಬ್ಬ ತನ್ನ ಇಬ್ಬರು ಮೇಲಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಿ ಬಳಿಕ ತಾನೂ ಗುಂಡು ಹೊಡೆದುಕೊಂಡಿರುವ ಘಟನೆ ಅಸ್ಸಾಂನ ಧುಬ್ರಿ ಜಿಲ್ಲೆಯ ಗಡಿ ಚೌಕಿ ಬಳಿ ಗುರುವಾರ ನಡೆದಿದೆ.

ಹತಿ ಚಾರ್ ಗಡಿ ಚೌಕಿ ಸಮೀಪ ಬೆಳಿಗ್ಗೆ 10.30ರ ಸುಮಾರಿಗೆ ಬಿಎಸ್‌ಎಫ್ ಜವಾನ ಪ್ರಭಾಕರ್ ಮಿಶ್ರಾ ಎಂಬುವರು ತನ್ನ ಇಬ್ಬರು ಮೇಲಧಿಕಾರಿಗಳು ಮತ್ತು ಅವರ ಜೊತೆಗಿದ್ದ ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ತಾನೂ ಗುಂಡು ಹೊಡೆದುಕೊಂಡಿದ್ದಾನೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳನ್ನು ಬಾಬು ಲಾಲ್, ಸುರೇಂದರ್ ಮತ್ತು ಪೇದೆಯನ್ನು ಓಂಪ್ರಕಾಶ್ ಎಂದು ಗುರುತಿಸಲಾಗಿದೆ. ಪ್ರಭಾಕರ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಘಟನೆ ನಡೆದ ಸುದ್ದಿ ತಿಳಿಯುತ್ತಲೇ ಬ್ರಹ್ಮಪುತ್ರ ನದಿಗೆ ಹೊಂದಿಕೊಂಡಿರುವ ಗಡಿ ಚೌಕಿಗೆ ಅರೆಸೇನಾ ಪಡೆ ಯೋಧರನ್ನು ಕಳುಹಿಸಿಕೊಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲ ತಿಂಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಪಂಜಾಬ್ ಮತ್ತು ರಾಜಸ್ತಾನಗಳಲ್ಲಿ ಇದಕ್ಕೂ ಮುನ್ನ ಇಂತಹುದೇ ಘಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.