ADVERTISEMENT

ಬಿಜೆಪಿಗೆ ಭಾರಿ ಜನಬೆಂಬಲ: ಯೋಗಿ

ಪಿಟಿಐ
Published 11 ಮಾರ್ಚ್ 2018, 19:30 IST
Last Updated 11 ಮಾರ್ಚ್ 2018, 19:30 IST

ಲಖನೌ: ಬಿಜೆಪಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ  ಭಾನುವಾರ ಹೇಳಿದ್ದಾರೆ.

ಗೋರಖ್‌ಪುರ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕೇಂದ್ರಿತ ಆಡಳಿತದಲ್ಲಿ ಜನರು ನಂಬಿಕೆಯಿರಿಸಿದ್ದಾರೆ ಎಂದರು.

ಫಲಿತಾಂಶ ಪುನರಾವರ್ತನೆ: 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಬಾರಿಯ ಫುಲ್ಪುರ ಲೋಕಸಭಾ ಉಪಚುನಾವಣೆಯಲ್ಲಿ ಪುನರಾವರ್ತನೆಯಾಗಲಿದೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ವಿಶ್ವಾಸ ವ್ಯಕ್ತಪಡಿದ್ದಾರೆ.  ಮಾರ್ಚ್ 14ರಂದು ಪ್ರಕಟವಾಗುವ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೌಶಲೇಂದ್ರ ಪಟೇಲ್ ಜಯಶಾಲಿಯಾಗಲಿದ್ದಾರೆ ಎಂದಿದ್ದಾರೆ.

ADVERTISEMENT

ಯೋಗಿ ಆದಿತ್ಯನಾಥ ಹಾಗೂಕೇಶವ ಪ್ರಸಾದ್ ಮೌರ್ಯ ಅವರು ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆಯಿತು. ಗೋರಖ್‌ಪುರದಲ್ಲಿ ಶೇ 43, ಫುಲ್ಪುರದಲ್ಲಿ ಶೇ 37.39 ಹಾಗೂ ಬಿಹಾರದ ಅರಾರಿಯಾ ಕ್ಷೇತ್ರದಲ್ಲಿ ಶೇ 57ರಷ್ಟು ಮತದಾನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.