ನವದೆಹಲಿ: ‘ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ. ಪಕ್ಷ ಮತ್ತು ಸರ್ಕಾರದ ದೃಷ್ಟಿಯಿಂದ ಮಹತ್ವದ್ದಾಗಿರುವ ವಿಧಾನಸಭೆ ಮೂರು ಉಪ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಸ್ಪಷ್ಟಪಡಿಸಿದರು.
‘ಜಗದೀಶ್ ಶೆಟ್ಟರ್ ಮನೆಯಲ್ಲಿ ನನ್ನ ಸೂಚನೆ ಮೇಲೆ ಸಭೆ ನಡೆದಿದೆ. ಉಪ ಚುನಾವಣೆ ಕಾರ್ಯತಂತ್ರ ಕುರಿತು ಚರ್ಚೆ ಮಾಡಲಾಗಿದೆ. ನಾನು ರಾಜ್ಯದ ಕೆಲಸಗಳ ನಿಮಿತ್ತ ದೆಹಲಿಗೆ ಬಂದಿದ್ದರಿಂದ ಅವರು ಸಭೆ ಸೇರಿದ್ದಾರೆ. ದೆಹಲಿಯಿಂದ ಹಿಂತಿರುಗಿದ ಬಳಿಕ ನಾನೂ ಅವರನ್ನು ಕೂಡಿಕೊಳ್ಳುತ್ತೇನೆ’ ಎಂದು ಯಡಿಯೂರಪ್ಪ ಹೇಳಿದರು.
ಮಂಗಳವಾರ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವೆ ಎಂದು ಮುಖ್ಯಮಂತ್ರಿ ವಿವರಿಸಿದರು. ಪಕ್ಷದ ನಾಯಕರು ಸೇರಿದರೆ ಅದು ನನ್ನ ವಿರುದ್ಧ ನಡೆಯುತ್ತಿರುವ ಸಭೆ ಎಂದು ಕಲ್ಪನೆ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಅಭಿಪ್ರಾಯ ಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.