ADVERTISEMENT

‘ಬಿಜೆಪಿಯ ಶಾಶ್ವತ ಮಿತ್ರ ಎಸ್‌ಎಡಿ’

ಪಿಟಿಐ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST
ಅಮಿತ್ ಶಾ ಅವರು ಚಂಡಿಗಡದಲ್ಲಿ ಶಿರೋಮಣಿ ಅಕಾಲಿದಳ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರ ಕೈ ಕುಲುಕಿದರು. ಸುಖ್‌ಬಿರ್‌ ಸಿಂಗ್ ಬಾದಲ್ ಇದ್ದರು –ಪಿಟಿಐ ಚಿತ್ರ
ಅಮಿತ್ ಶಾ ಅವರು ಚಂಡಿಗಡದಲ್ಲಿ ಶಿರೋಮಣಿ ಅಕಾಲಿದಳ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರ ಕೈ ಕುಲುಕಿದರು. ಸುಖ್‌ಬಿರ್‌ ಸಿಂಗ್ ಬಾದಲ್ ಇದ್ದರು –ಪಿಟಿಐ ಚಿತ್ರ   

ಚಂಡಿಗಡ: ‘ಶಿರೋಮಣಿ ಅಕಾಲಿ ದಳವು (ಎಸ್‌ಎಡಿ) ಬಿಜೆಪಿಯ ಶಾಶ್ವತ ಮಿತ್ರ ಪಕ್ಷವಾಗಿದೆ. 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ಎಲ್ಲ ಮಿತ್ರ ಪಕ್ಷಗಳು ಒಗ್ಗಟ್ಟಾಗಿರಬೇಕು’ ಎಂದು ಪಕ್ಷದ ಅಧ್ಯಕ್ಷ ಸುಖ್‌ಬೀರ್‌ ಸಿಂಗ್‌ ಬಾದಲ್‌ ಹೇಳಿದ್ದಾರೆ.

ಪಕ್ಷದ ಹಿರಿಯ ಮುಖಂಡ ಪ್ರಕಾಶ್‌ಸಿಂಗ್‌ ಬಾದಲ್‌ ಹಾಗೂ ಇತರ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಪಕ್ಷ ಹಾಗೂ ಬಿಜೆಪಿ ನಡುವೆ ಯಾವುದೇ ಸಂಘರ್ಷ ಇಲ್ಲ’ ಎಂದರು.

‘2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರೂಪಿಸಬೇಕಾದ ಕಾರ್ಯತಂತ್ರದ ಬಗ್ಗೆ ಶಾ ಜೊತೆ ಚರ್ಚಿಸಲಾಯಿತು. ಆರು ತಿಂಗಳಲ್ಲಿ ಚುನಾವಣೆ ಬರಲಿದೆ. ಹೀಗಾಗಿ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು, ಒಂದಾಗಿ ಚುನಾವಣೆ ಎದುರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು’ ಎಂದು ತಿಳಿಸಿದರು.

ADVERTISEMENT

‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಥಾನಗಳ ಹಂಚಿಕೆ ಸಂಬಂಧ ಚರ್ಚಿಸಲು ಆಂತರಿಕವಾಗಿ ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.