
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಮೋದಿ ಅವರಿಗೆ ಉನ್ನತ ಸ್ಥಾನ ನೀಡಿರುವುದು ಬಿಜೆಪಿಯ ಆಂತರಿಕ ವಿಷಯವಾಗಿದೆ ಎಂದು ಜೆಡಿಯು ಪ್ರತಿಕ್ರಿಯಿಸಿದೆ.
`ಎನ್‌ಡಿಎ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದಕ್ಕೆ ಮುನ್ನ ಮಿತ್ರಪಕ್ಷಗಳ ಸಮ್ಮತಿ ಬೇಕಾಗುತ್ತದೆ' ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.
`ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೋ ಅವರು ರಾಷ್ಟ್ರೀಯ ಕಾರ್ಯಸೂಚಿಯನ್ನು ಒಪ್ಪಬೇಕಾಗುತ್ತದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದಕ್ಕೆ ಜೆಡಿಯು ಆಕ್ಷೇಪ ಇದ್ದೇ ಇದೆ ಎನ್ನುವುದನ್ನೂ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.