ADVERTISEMENT

ಬಿಜೆಪಿ ಕೇಂದ್ರ ಸಮಿತಿ ಸಭೆ: ಅಡ್ವಾಣಿ ಗೈರು

​ಪ್ರಜಾವಾಣಿ ವಾರ್ತೆ
Published 13 ಜೂನ್ 2012, 19:30 IST
Last Updated 13 ಜೂನ್ 2012, 19:30 IST

ನವದೆಹಲಿ (ಐಎಎನ್‌ಎಸ್): ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಬುಧವಾರ ಸಂಜೆ ಕರೆಯಲಾಗಿದ್ದ ಬಿಜೆಪಿ ಕೇಂದ್ರ ಸಮಿತಿ ಸಭೆಗೆ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಗೈರು ಹಾಜರಾಗಿದ್ದಾರೆ.

ಗಡ್ಕರಿ ಜತೆ ಭಿನ್ನಾಭಿಪ್ರಾಯ ಹೊಂದಿದ್ದ ಅಡ್ವಾಣಿ ಪೂರ್ವ ನಿಗದಿತ ಕಾರ್ಯಕ್ರಮದಂತೆ ತಮಿಳುನಾಡಿಗೆ ತೆರಳಿದ್ದಾರೆ. ಕೂಡುಂಕುಳಂ ಪರಮಾಣು ಸ್ಥಾವರ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಅಡ್ವಾಣಿ ತೆರಳಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆ ಹಾಗೂ ಬೆಲೆ ಏರಿಕೆಗೆ ಸಂಬಂಧಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.