ಅಹಮದಾಬಾದ್ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಬಂಡೆದ್ದಿರುವ ಬಿಜೆಪಿ ಭಿನ್ನಮತೀಯ ನಾಯಕ, ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್, ಬುಧವಾರ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ತಮ್ಮ ಅತೃಪ್ತಿಯನ್ನು ಹೊರಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಾಂಧಿನಗರದಲ್ಲಿರುವ ಕೇಶುಭಾಯ್ ನಿವಾಸದಲ್ಲಿ ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ದೆಹಲಿ ಭೇಟಿ ನಿರ್ಧಾರ ತೆಗೆದುಕೊಳ್ಳಲಾಯಿತು. ಪಕ್ಷದ ಹಿರಿಯ ಮುಖಂಡರಾದ ನಿತಿನ್ ಗಡ್ಕರಿ, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಷ್ಮಾ ಸ್ವರಾಜ್ ಹಾಗೂ ಸಂಜಯ್ ಜೋಶಿ ಅವರನ್ನು ಪಟೇಲ್ ಮತ್ತವರ ಬಣ ಭೇಟಿ ಮಾಡಲಿದೆ.
ರಾಜ್ಯದಲ್ಲಿ ಬಿಜೆಪಿ ಸ್ಥಿತಿಗತಿ ಕುರಿತು ಪಟೇಲ್ ಅವರು ವರಿಷ್ಠರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹ್ತಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.