ADVERTISEMENT

ಬಿಜೆಪಿ ಮುಖಂಡರಿಗೆ ರಾಷ್ಟ್ರಪತಿ ಪ್ರಣವ್ ದೂರವಾಣಿ ಕರೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 19:30 IST
Last Updated 16 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ರಾಷ್ಟ್ರಪತಿ ಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ವೇಳೆ ಗಣ್ಯರಿಗೆ ಏರ್ಪಡಿಸಲಾಗಿದ್ದ ಆಸನ ವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಮುಖಂಡರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಗುರುವಾರ ದೂರವಾಣಿ ಕರೆ ಮಾಡಿ ಸಮಾಧಾನ ಹೇಳಿದ್ದಾರೆ.

ಅಡ್ವಾಣಿ, ಜೇಟ್ಲಿ ಹಾಗೂ ಸುಷ್ಮಾ ಅವರೊಂದಿಗೆ ಮಾತನಾಡಿದ ಮುಖರ್ಜಿ, `ಮುಂದೆ ಇಂತಹ ಅವ್ಯವಸ್ಥೆ ಪುನರಾವರ್ತನೆ ಯಾಗದಂತೆ~ ಭರವಸೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.