ADVERTISEMENT

ಬಿಜೆಪಿ ರಾಷ್ಟ್ರವ್ಯಾಪಿ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 5 ಜೂನ್ 2011, 19:30 IST
Last Updated 5 ಜೂನ್ 2011, 19:30 IST

ಲಖನೌ (ಐಎಎನ್‌ಎಸ್): ಬಾಬಾ ರಾಮ್‌ದೇವ್ ಅವರೊಂದಿಗೆ ಸರ್ಕಾರ ವರ್ತಿಸಿದ ರೀತಿಯನ್ನು ಖಂಡಿಸಿ ಬಿಜೆಪಿ ಭಾನುವಾರ ಸಂಜೆಯಿಂದ 24 ಗಂಟೆಗಳ ರಾಷ್ಟ್ರವ್ಯಾಪಿ ಸತ್ಯಾಗ್ರಹ ಆರಂಭಿಸಿದೆ.

ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಹಾಗೂ ಮುಖಂಡ ಎಲ್.ಕೆ. ಅಡ್ವಾಣಿ ಅವರ ನೇತೃತ್ವದಲ್ಲಿ ಹಲವು ಮುಖಂಡರು ಸತ್ಯಾಗ್ರಹಕ್ಕೆ ಚಾಲನೆ ನೀಡಲು ರಾಜ್‌ಘಾಟ್‌ಗೆ ತೆರಳಿದರು. ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಹಿರಿಯ ಧುರೀಣರಾದ ರಾಜ್‌ನಾಥ್ ಸಿಂಗ್, ಅರುಣ್ ಜೇಟ್ಲಿ, ರವಿಶಂಕರ್ ಪ್ರಸಾದ್, ಮುರಳಿ ಮನೋಹರ ಜೋಷಿ, ಅನಂತಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಗಡ್ಕರಿ ಟೀಕೆ: ರಾಮ್‌ದೇವ್ ಅವರ ವಿಷಯದಲ್ಲಿ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸಿದೆ ಎಂದು  ನಿತಿನ್ ಗಡ್ಕರಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.