ನವದೆಹಲಿ: ಬಿಸಿಸಿಐಗೆ ಸುಪ್ರೀಂಕೋರ್ಟ್ನಿಂದ ನೇಮಿಸಲಾಗಿರುವ ಆಡಳಿತಗಾರರ ಸಮಿತಿಯ (ಸಿಒಎ) ಸದಸ್ಯ ಸ್ಥಾನಕ್ಕೆ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ರಾಜಿನಾಮೆ ಸಲ್ಲಿಸಿದ್ದಾರೆ.
ಸಿಒಎ ಮುಖ್ಯಸ್ಥ ವಿನೋದ್ ರಾಯ್ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ಗೂ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಿಒಎ ಸಮಿತಿಯು ನಾಲ್ವರು ಸದಸ್ಯರನ್ನು ಒಳಗೊಂಡಿದೆ. ಸುಪ್ರೀಂ ಕೋರ್ಟ್ 2017ರ ಜನವರಿ 30 ಸಿಒಎ ಸಮಿತಿಯನ್ನು ರಚನೆ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.