ADVERTISEMENT

ಬಿಹಾರ: ಟಾರ್ಚ್‌ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯೆ; ವಿಡಿಯೊ ವೈರಲ್

ಏಜೆನ್ಸೀಸ್
Published 19 ಮಾರ್ಚ್ 2018, 12:17 IST
Last Updated 19 ಮಾರ್ಚ್ 2018, 12:17 IST
ಬಿಹಾರ: ಟಾರ್ಚ್‌ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯೆ; ವಿಡಿಯೊ ವೈರಲ್
ಬಿಹಾರ: ಟಾರ್ಚ್‌ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯೆ; ವಿಡಿಯೊ ವೈರಲ್   

ಪಾಟ್ನಾ: ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವಿದ್ಯುತ್‌ ಸೌಲಭ್ಯವಿಲ್ಲದ ಕಾರಣ ವೈದ್ಯೆಯೊಬ್ಬರು ಟಾರ್ಚ್‌ ಬೆಳಕಿನ ಸಹಾಯದಿಂದ ವ್ಯಕ್ತಿಯ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ಬಿಹಾರದ ಸಹಸ್ರದಲ್ಲಿರುವ ಸದಾರ್ ಆಸ್ಪತ್ರೆಯಲ್ಲಿ ನಡೆದಿದೆ.

ಈ ಘಟನಾ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಇದುವರೆಗೆ ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಸ್ಪಷ್ಟನೆ ಹಾಗೂ ಪ್ರತಿಕ್ರಿಯೆ ನೀಡಿಲ್ಲ.

ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯ ಸುತ್ತ ಹಲವರು ನೆರೆದಿದ್ದಾರೆ. ಕೊಠಡಿಯಲ್ಲಿ ವಿದ್ಯುತ್ ಇಲ್ಲದ ಕಾರಣ ವೈದ್ಯೆಯೊಬ್ಬರು ಬೇರೊಬ್ಬರು ಹಿಡಿದ  ಟಾರ್ಚ್‌ ಬೆಳಕಿನ ಸಹಾಯದಿಂದ ರೋಗಿಗೆ ಹೊಲಿಗೆ ಹಾಕುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಅಲ್ಲದೇ ಶಸ್ತ್ರಚಿಕಿತ್ಸೆ ವೇಳೆ ರೋಗಿಯು ಬಿಳಿ ವಸ್ತ್ರದ ಬದಲಿ ಕಾಕಿ ಬಟ್ಟೆ ಧರಿಸಿರುವುದು ಸಹ ಸೆರೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.