ADVERTISEMENT

ಬೀದಿನಾಯಿ: ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 19:30 IST
Last Updated 17 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಜನರಿಗೆ ತೊಂದರೆ ಕೊಡುವ ಬೀದಿ ನಾಯಿಗಳನ್ನು ಪಾಲಿಕೆ ಅಧಿಕಾರಿಗಳು ನಿರ್ಮೂಲನೆ ಮಾಡಬೇಕೇ, ಬೇಡವೇ ಎನ್ನುವುದರ ಬಗೆಗಿನ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್‌ಗೆ ಮುಂದೂಡಿದೆ.

ಜನರಿಗೆ ತೊಂದರೆ ಕೊಡುತ್ತಿದ್ದ ಬೀದಿ ನಾಯಿಗ ಳನ್ನು ನಿರ್ಮೂಲನೆ ಮಾಡಲು ಮುಂಬೈ ನಗರ ಪಾಲಿಕೆಗೆ ಅನುಮತಿ ನೀಡಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ 2009ರ ಜ. 23ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

ಆದರೆ  `ಬೀದಿ ನಾಯಿಗಳ ಹಾವಳಿ~ ಎನ್ನುವ ಪದದ ಸ್ಪಷ್ಟ ಅರ್ಥ ನೀಡುವವರೆಗೆ ಹೈಕೋರ್ಟ್ ಆದೇಶ ಜಾರಿಗೊಳಿಸಬಾರದು ಎಂದು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ  ಕೋರಿತ್ತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.