
ಪ್ರಜಾವಾಣಿ ವಾರ್ತೆನಮಕ್ಕಲ್ (ಪಿಟಿಐ): ಬೆಂಗಳೂರಿನಿಂದ ತಂಜಾವೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ತಮಿಳುನಾಡಿನ ಪುದ್ದುಚಟ್ಟೀರಾಮ್ ಎಂಬಲ್ಲಿ ಶನಿವಾರ ಬೆಳಗಿನ ಜಾವ ಅಪಘಾತಕ್ಕೀಡಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿದಂತೆ ಐವರು ಸಾವನ್ನಪ್ಪಿದ್ದು, ಇತರೆ 17 ಮಂದಿ ಗಾಯಗೊಂಡಿದ್ದಾರೆ.
ಬಸ್ ಚಾಲಕ ನಿದ್ದೆಯಿಂದ ತೂಕಡಿಸಿದ ಪರಿಣಾಮ ಬಸ್ ನೇರ ರಸ್ತೆ ಬದಿ ನಿಂತಿದ್ದ ಸರಕು ಸಾಗಣೆ ಟ್ರಕ್‌ಗೆ ಡಿಕ್ಕಿ ಹೊಡೆಯಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.