ಚಿಕ್ಕಬಳ್ಳಾಪುರ: ತೈಲ ಆಮದಿಗೆ ಸಂಬಂಧಿಸಿದಂತೆ ಲಾಬಿ, ಒತ್ತಡ ಮತ್ತು ಬೆದರಿಕೆ ಎದುರಿಸುತ್ತಿರುವುದಾಗಿ ಹೇಳಿದ್ದ ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿಯವರು, `ಬೆದರಿಕೆ ನನಗಲ್ಲ, ತೈಲ ಆಮದಿಗೆ ಸಂಬಂಧಿಸಿದಂತೆ ನಾನು ಕೈಗೊಂಡಿರುವ ನಿರ್ಣಯಗಳಿಗೆ ಬೆದರಿಕೆ ಒಡ್ಡಲಾಗುತ್ತಿದೆ' ಎಂದು ಶನಿವಾರ ಇಲ್ಲಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನನಗೆ ಯಾರೂ ಬೆದರಿಕೆ ಒಡ್ಡಿಲ್ಲ. ಆದರೆ ತೈಲ ಆಮದಿಗೆ ಸಂಬಂಧಿಸಿದಂತೆ ನಾನು ಕೈಗೊಂಡಿರುವ ನಿರ್ಣಯಗಳಿಗೆ ಬೆದರಿಕೆ ಮತ್ತು ಒತ್ತಡ ವ್ಯಕ್ತವಾಗುತ್ತಿದೆ. ಇದರ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ' ಎಂದರು. ಯಾವ್ಯಾವ ಪಕ್ಷಗಳ ಕೈವಾಡವಿದೆ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.