ADVERTISEMENT

ಬೈಕ್‌ ನೀಡದ ಕಾರಣಕ್ಕೆ ಬಾಲಕ ಆತ್ಮಹತ್ಯೆ

ಪಿಟಿಐ
Published 14 ಮೇ 2018, 19:30 IST
Last Updated 14 ಮೇ 2018, 19:30 IST

ಮುಜಫ್ಫರ್‌ನಗರ: ಮನೆಯವರು ಬೈಕ್ ಬಳಕೆಗೆ ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಹನ್ನೆರಡು ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್‌ ಬಳಸಲು ಕೊಡದ ಕಾರಣಕ್ಕೆ ಬಾಲಕ ಬೇಸರಗೊಂಡಿದ್ದ ಎಂದು ಮನೆಯವರು ತಿಳಿಸಿದ್ದಾರೆ.

ADVERTISEMENT

ಮತ್ತೊಂದು ಪ್ರಕರಣದಲ್ಲಿ, ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.