ADVERTISEMENT

ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಪಿಟಿಐ
Published 22 ಮಾರ್ಚ್ 2018, 20:27 IST
Last Updated 22 ಮಾರ್ಚ್ 2018, 20:27 IST
ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ
ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ   

ನವದೆಹಲಿ‌/ಪೋಖ್ರಾನ್‌: ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ರಾಜಸ್ಥಾನದ ಪೋಖ್ರಾನ್‌ನಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು.

‘ಕ್ಷಿಪಣಿಯು ನಿಗದಿತ ಗುರಿಯನ್ನು ನಿಖರವಾಗಿ ತಲುಪಿದೆ. ಬೆಳಿಗ್ಗೆ 8.42ಕ್ಕೆ ಪರೀಕ್ಷೆ ನಡೆಯಿತು’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿದ್ದಾರೆ.

ಕ್ಷಿಪಣಿಯು 400 ಕಿಲೋ ಮೀಟರ್‌ ವ್ಯಾಪ್ತಿವರೆಗೂ ಕ್ರಮಿಸುವ ಸಾಮರ್ಥ್ಯ ಹೊಂದಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತು ರಷ್ಯಾದ ಎನ್‌ಪಿಒ ಮಷಿನೊಸ್ಟ್ರೊಯೆನಿಯಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲಾಗಿದೆ.

ADVERTISEMENT

ಮೂರು ತಿಂಗಳ ಹಿಂದೆ, ಮೊದಲ ಬಾರಿ ಭಾರತೀಯ ವಾಯುಪಡೆಯ ಸುಖೋಯ್–30 ಎಂಕೆಐ ಯುದ್ಧ ವಿಮಾನದ ಮೂಲಕ ಬ್ರಹ್ಮೋಸ್‌ ಕ್ಷಿಪಣಿ ಪರೀಕ್ಷೆ ನಡೆದಿತ್ತು. ಆದಾದ ಬಳಿಕ ಈಗ ಮತ್ತೆ ಪರೀಕ್ಷೆ ನಡೆದಿದೆ. ಸುಖೋಯ್–40 ಯುದ್ಧ ವಿಮಾನದಲ್ಲೂ ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿಯನ್ನು ಅಳವಡಿಸುವ ಕಾರ್ಯ ಈಗಾಗಲೇ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.