ADVERTISEMENT

ಭಂವರಿದೇವಿ ಪ್ರಕರಣ: ಸದಾ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2012, 19:30 IST
Last Updated 21 ಫೆಬ್ರುವರಿ 2012, 19:30 IST

ಜೋಧಪುರ (ಪಿಟಿಐ): ಕೊಲೆಯಾದ ದಾದಿ ಭಂವರಿದೇವಿ ಪ್ರಕರಣದ ಸಂಬಂಧದಲ್ಲಿ ರಾಜಕೀಯ ವ್ಯಕ್ತಿಗಳಿಂದ ಬೆದರಿಕೆ ಬರುತ್ತಿದೆ. ಇದು ನಮ್ಮ ಪರವಾಗಿರುವ ಸಾಕ್ಷಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಸಿಬಿಐ, ರಾಜಸ್ತಾನ ಹೈಕೋರ್ಟ್‌ಗೆ ತಿಳಿಸಿದೆ.

ಭಂವರಿದೇವಿ ಪತಿ ಅಮರಚಂದ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಸಿಬಿಐ ವಕೀಲ ಪನ್ನೆ ಸಿಂಗ್ ಅವರು ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಈ ಪ್ರಕರಣದಲ್ಲಿ ಸಿಬಿಐ ನಿಷ್ಪಕ್ಷಪಾತ ದೃಷ್ಟಿಯಿಂದ ತನಿಖೆ ನಡೆಸಿದ್ದು, ಈ ಪ್ರಕರಣದಲ್ಲಿ ಹಲವಾರು ಪ್ರಭಾವಿ ರಾಜಕೀಯ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.