ADVERTISEMENT

ಭವಿಷ್ಯನಿಧಿ ಪಿಂಚಣಿ ಹೆಚ್ಚಳ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2012, 19:30 IST
Last Updated 2 ನವೆಂಬರ್ 2012, 19:30 IST

ತಿರುವನಂತಪುರ (ಪಿಟಿಐ): ಕಾರ್ಮಿಕರ ಭವಿಷ್ಯ ನಿಧಿಯ ಪಿಂಚಣಿ ಮೊತ್ತವನ್ನು  ಒಂದು ಸಾವಿರ ರೂಪಾಯಿಗಳಿಗೆ ಹೆಚ್ಚಿಸುವ ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಬೇಕೆಂಬ ಪ್ರಸ್ತಾವವು ಸದ್ಯ ಹಣಕಾಸು ಸಚಿವಾಲಯದ ಮುಂದೆ ಇದ್ದು, ಶೀಘ್ರದಲ್ಲಿಯೇ ಕೇಂದ್ರ ಸಂಪುಟ ಸಭೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಖಾತೆಯ ರಾಜ್ಯ ಸಚಿವ ಕೊಡಿಕ್ಕುನ್ನಿಲ್ ಸುರೇಶ್ ಶುಕ್ರವಾರ ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ತೊಂದರೆ ಅನುಭವಿಸುತ್ತಿರುವ ದಾದಿಯರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಅವರು, ದಾದಿಯರ ವೇತನ ಮತ್ತು ಸವಲತ್ತುಗಳಿಗಾಗಿ ರಾಜ್ಯ ಸರ್ಕಾರಗಳೇ ಸೂಕ್ತ ಕಾನೂನುಗಳನ್ನು ರಚಿಸಬೇಕು ಎಂದು ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ ಎಂದು ತಿಳಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.