ADVERTISEMENT

ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 19:59 IST
Last Updated 22 ಜುಲೈ 2013, 19:59 IST
ಭಾರತ ಪ್ರವಾಸದಲ್ಲಿರುವ ಅಮೆರಿಕದ ಉಪಾಧ್ಯಕ್ಷ ಜಾಯ್ ಬಿಡೆನ್ ಅವರು ಸೋಮವಾರ ನವದೆಹಲಿಯಲ್ಲಿರುವ ಮಹಾತ್ಮ ಗಾಂಧಿ ಸ್ಮೃತಿ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಬಿಡೆನ್ ಅವರ ಪತ್ನಿ ಜಿಲ್, ಭಾರತದಲ್ಲಿನ ಅಮೆರಿಕದ ರಾಯಭಾರಿ ನ್ಯಾನ್ಸಿ ಪೊವೆಲ್ ಹಾಗೂ ಗಾಂಧಿ ಅವರ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಜಿ ಉಪಸ್ಥಿತರಿದ್ದರು 	-ಎಎಫ್‌ಪಿ ಚಿತ್ರ

ನವದೆಹಲಿ (ಪಿಟಿಐ): ಅಮೆರಿಕದ ಉಪಾಧ್ಯಕ್ಷ ಜಾಯ್ ಬಿಡೆನ್ ಅವರು ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ಸೋಮವಾರ ಇಲ್ಲಿಗೆ ಬಂದಿಳಿದರು.

ವಾಣಿಜ್ಯ, ಇಂಧನ, ಹವಾಮಾನ ಬದಲಾವಣೆ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ ಮತ್ತು ಅಮೆರಿಕದ ನಡುವೆ ಬಾಂಧವ್ಯ ವೃದ್ಧಿ ಅವರ ಪ್ರವಾಸದ ಪ್ರಮುಖ ಕಾರ್ಯಸೂಚಿಗಳಾಗಿವೆ.

ಬಿಡೆನ್ ಮತ್ತು ಅವರ ಪತ್ನಿ ಜಿಲ್ ಅವರನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಮತ್ತು ಅಮೆರಿಕದಲ್ಲಿರುವ ಭಾರತದ ರಾಯಭಾರಿ ನಿರುಪಮಾ ರಾವ್ ಬರಮಾಡಿಕೊಂಡರು. ಬಳಿಕ ಅವರು ಗಾಂಧಿ ಸ್ಮೃತಿ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.

ಬಿಡೆನ್ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಮತ್ತು ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವರು.

ಬಿಡೆನ್ ಅಮೆರಿಕದ ಸೆನೆಟರ್ ಆಗಿದ್ದಾಗ 2008ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದರು. ಅಮೆರಿಕದ ಉಪಾಧ್ಯಕ್ಷರಾದ ಬಳಿಕ ಭಾರತಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.