ADVERTISEMENT

ಭಾರತಕ್ಕೆ ಬಂದಿಳಿದ ನೇಪಾಳ ಪ್ರಧಾನಿ

ಪಿಟಿಐ
Published 6 ಏಪ್ರಿಲ್ 2018, 19:30 IST
Last Updated 6 ಏಪ್ರಿಲ್ 2018, 19:30 IST
ನವದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಒಲಿ ಅವರನ್ನು ಗೃಹಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು ಎಎಫ್‌ಪಿ ಚಿತ್ರ
ನವದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಒಲಿ ಅವರನ್ನು ಗೃಹಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು ಎಎಫ್‌ಪಿ ಚಿತ್ರ   

ನವದೆಹಲಿ : ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿ ಅವರು ಶುಕ್ರವಾರ ಭಾರತಕ್ಕೆ ಬಂದಿದ್ದು, ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್‌ಸಿಂಗ್‌ ಅವರು ಬರಮಾಡಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಯಾಗಲಿದ್ದಾರೆ.

ಮೂರು ದಿನಗಳ ಪ್ರವಾಸದಲ್ಲಿ ಉತ್ತರಾಖಂಡದ ಪಂತ್‌ನಗರದಲ್ಲಿರುವ ಜಿ.ಬಿ.ಪಂಥ್‌ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ಕೇಂದ್ರ, ತಳಿ ಬೀಜ ಉತ್ಪಾದನೆ ಕೇಂದ್ರಕ್ಕೂ ಒಲಿ ಅವರು ಭೇಟಿ ನೀಡಲಿದ್ದಾರೆ. ಈ ವೇಳೆ ಕೃಷಿ ವಿ.ವಿ ಒಲಿ ಅವರಿಗೆ ‘ಗೌರವ ಡಾಕ್ಟರೇಟ್‌’ ನೀಡಿ ಸನ್ಮಾನಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.