ನವದೆಹಲಿ: ಭಾರತದ ಗಡಿ ನಿಯಂತ್ರಣಾ ರೇಖೆ ಬಳಿ ಶನಿವಾರ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನ ಭಾರತದ ಐವರು ಯೋಧರನ್ನು ಹತ್ಯೆಗೈದಿರುವುದಾಗಿ ವಾದಿಸಿತ್ತು. ಈ ವಾದವನ್ನು ಭಾರತ ತಳ್ಳಿ ಹಾಕಿದೆ. ಇದರ ಬೆನ್ನಲ್ಲೇ ಭಾರತದ ಸೇನಾ ಚೌಕಿಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ವಾದಿಸಿರುವ ಪಾಕ್, ದಾಳಿಯ ವಿಡಿಯೊ ಬಹಿರಂಗ ಪಡಿಸಿದೆ.
ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಅವರು ಟ್ವಿಟರ್ನಲ್ಲಿ ಈ ವಿಡಿಯೊ ಟ್ವೀಟ್ ಮಾಡಿದ್ದಾರೆ.
ಭಾರತ ಪಾಕಿಸ್ತಾನದ ಮೇಲೆ ಅಪ್ರಚೋದಿತ ದಾಳಿ ನಡೆಸಿದ್ದಕ್ಕಾಗಿ ಭಾರತದ ಸೇನಾ ಚೌಕಿಗಳ ಮೇಲೆ ಪ್ರತಿದಾಳಿ ನಡೆಸಿರುವ ವಿಡಿಯೊ ಇದು ಎಂದು ಗಫೂರ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.