ADVERTISEMENT

ಭೀಮಾ ಕೋರೆಗಾಂವ್ ಹಿಂಸಾಚಾರ: ಪ್ರತ್ಯಕ್ಷದರ್ಶಿಯಾಗಿದ್ದ ದಲಿತ ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವು?

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 16:25 IST
Last Updated 24 ಏಪ್ರಿಲ್ 2018, 16:25 IST
ಭೀಮಾ  ಕೋರೆಗಾಂವ್ ಸಂಘರ್ಷ-  ಸಂಗ್ರಹ ಚಿತ್ರ
ಭೀಮಾ ಕೋರೆಗಾಂವ್ ಸಂಘರ್ಷ- ಸಂಗ್ರಹ ಚಿತ್ರ   

ಪುಣೆ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್‌ ಹಿಂಸಾಚಾರದ ಪ್ರತ್ಯಕ್ಷದರ್ಶಿಯಾಗಿದ್ದ 19 ಹರೆಯದ ದಲಿತ ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾಳೆ. ಈಕೆಯ ಶವ ಭಾನುವಾರದಂದು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜನವರಿ ತಿಂಗಳಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಪೂಜಾ ಸಾಕತ್ ಎಂಬ ದಲಿತ ಯುವತಿಯ ಮನೆಗೆ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯವನ್ನು ಪೂಜಾ ಕಣ್ಣಾರೆ ಕಂಡಿದ್ದು, ದುಷ್ಕರ್ಮಿಗಳ ವಿರುದ್ದ ದೂರು ನೀಡಿದ್ದಳು.

ಮನೆಗೆ ಬೆಂಕಿ ಹಚ್ಚಿದ ಆರೋಪಿಗಳ ವಿರುದ್ಧ ಹೇಳಿಕೆ ನೀಡದಂತೆ ಪೂಜಾ ಮೇಲೆ ಒತ್ತಡ ಹೇರಲಾಗಿತ್ತು. ಪೊಲೀಸರಿಗೆ ನೀಡಿದ ದೂರು ವಾಪಸ್ ಪಡೆಯುವಂತೆ ಅಲ್ಲಿನ ಸ್ಥಳೀಯರು ಆಕೆಗೆ ಬೆದರಿಕೆಯೊಡ್ಡುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ADVERTISEMENT

ಆದಾಗ್ಯೂ, ಪೂಜಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.

ಪೂಜಾ ಕಳೆದ ಶುಕ್ರವಾರ ನಾಪತ್ತೆಯಾಗಿದ್ದು, ಭಾನುವಾರ ಬೆಳಗ್ಗೆ ಆಕೆಯ ಶವ ಭೀಮಾ ಕೋರೆಗಾಂವ್ ಹಿಂಸಾಚಾರದ ನಿರಾಶ್ರಿತರ ಶಿಬಿರದ ಬಳಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.