ADVERTISEMENT

ಭೂಕಂಪ: ಕತ್ತಲಲ್ಲಿ ಪಶ್ಚಿಮ ಬಂಗಾಳ, 3 ಸಾವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 15:55 IST
Last Updated 18 ಸೆಪ್ಟೆಂಬರ್ 2011, 15:55 IST

ಕೋಲ್ಕತ್ತಾ (ಐಎಎನ್‌ಎಸ್): ಭಾನುವಾರ ಸಂಜೆ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಪಶ್ಚಿಮ ಬಂಗಾಳದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಇಲ್ಲಿನ ಉತ್ತರಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನತೆ ಕಗ್ಗತ್ತಳಲ್ಲಿ ಪರದಾಡುತ್ತಿದ್ದಾರೆ. 

ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜನತೆ ಭಯಭೀತಗೊಂಡಿದ್ದಾರೆ. ಉತ್ತರ ಬಂಗಾಳ ವ್ಯವಹಾರಗಳ ಸಚಿವ ಗೌತಮ್ ದೇವ್ ಅವರು ಭೂಕಂಪದಿಂದಾಗಿ ಕಾಲಿಂಪಾಂಗ್ ಸೇರಿದಂತೆ ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ಹಲವು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆತಂಕಪಡುವ ಅಗತ್ಯವಿಲ್ಲ ಎಲ್ಲೆಡೆ ತುರ್ತು ಪರಿಹಾರ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ ಎಂದಿದ್ದಾರೆ.

ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.