ನವದೆಹಲಿ (ಪಿಟಿಐ): ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ಪ್ರಸ್ತುತ ಪರಿಸ್ಥಿತಿ ಕುರಿತು ದೂರುದಾರರಿಗೆ ಎಸ್‌ಎಂಎಸ್ ಹಾಗೂ ಇ-ಮೇಲ್ ಮೂಲಕ ಮಾಹಿತಿ ನೀಡಲು ಕೇಂದ್ರ ಜಾಗೃತ ಆಯೋಗ ನಿರ್ಧರಿಸಿದೆ.
ಪ್ರಕರಣಗಳನ್ನು ತ್ವರಿತಗತಿಯಲ್ಲಿ ಪರಿಶೀಲನೆ ನಡೆಸಲು ಮತ್ತು ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಜನರ ದೂರುಗಳನ್ನು ಪರಿಹರಿಸುವ ಸಲುವಾಗಿ, ಇದಕ್ಕೆಂದೇ ರೂಪಿಸಲಾದ ಆನ್‌ಲೈನ್ ಅರ್ಜಿಗಳನ್ನು ಬಳಸಿಕೊಳ್ಳುವಂತೆ ಎಲ್ಲ ಸರ್ಕಾರಿ ಇಲಾಖೆಗಳ ಮುಖ್ಯ ಜಾಗೃತ ಅಧಿಕಾರಿಗಳನ್ನು ಕೋರಲಾಗಿದೆ.
ಆದರೆ ದೊಡ್ಡ ಹಗರಣಗಳಿಗೆ ಸಂಬಂಧಿಸಿದಂತೆ ಆಯೋಗ ವಿಸ್ತೃತ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾದ್ದರಿಂದ ಅಂತಹ ಪ್ರಕರಣಗಳು ಇದಕ್ಕೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕಾದ ಪ್ರಕರಣಗಳನ್ನು ಆರಂಭಿಕ ಹಂತದಲ್ಲಿ ಒಳಪಡಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.