ADVERTISEMENT

ಮಂಜುಳಾ ಚೆಲ್ಲೂರ್ ಬಾಂಬೆ ಹೈಕೋರ್ಟ್ ಸಿ.ಜೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2016, 20:27 IST
Last Updated 11 ಆಗಸ್ಟ್ 2016, 20:27 IST
ಮಂಜುಳಾ ಚೆಲ್ಲೂರ್
ಮಂಜುಳಾ ಚೆಲ್ಲೂರ್   

ಮುಂಬೈ:  ಕನ್ನಡಿಗರಾದ ಡಾ. ಮಂಜುಳಾ ಚೆಲ್ಲೂರ್ ಅವರು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆ) ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಡಾ. ಮಂಜುಳಾ ಅವರು 2014ರ ಆಗಸ್ಟ್‌ನಲ್ಲಿ ಕೋಲ್ಕತ್ತ ಹೈಕೋರ್ಟ್‌ನ ಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಈಗ  ಅಲ್ಲಿಂದ ಬಾಂಬೆ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿ ಆಗಿ ವರ್ಗಾವಣೆ ಗೊಂಡಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗವಾದ ನಂತರ ಅಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸಿದ್ದರು. ನಂತರ 2012ರಲ್ಲಿ ಅದೇ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.