
ಪ್ರಜಾವಾಣಿ ವಾರ್ತೆಮುಂಬೈ (ಪಿಟಿಐ): ಮಹಾರಾಷ್ಟ್ರ ಸರ್ಕಾರದ ಸಚಿವಾಲಯ (ಮಂತ್ರಾಲಯ) ಕಟ್ಟಡದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭಾರಿ ಬೆಂಕಿ ಅನಾಹುತಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಪ್ರಥ್ವಿರಾಜ್ ಚೌಹಾಣ್ ಅವರು ಶುಕ್ರವಾರ ಬೆಳಿಗ್ಗೆ ಕ್ಯಾಬಿನೆಟ್ ಸಭೆ ನಡೆಸಿದರು. ನಂತರ ಈ ದುರ್ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆಯೂ ಆದೇಶಿಸಿದರು.
ಘಟನೆಯಲ್ಲಿ ಮುಖ್ಯಮಂತ್ರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನಿರುದ್ಧ ಅಷ್ಟಪುತ್ರೆ ಅವರು ಗಾಯಗೊಂಡಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವರ್ ಬೆಳಿಗ್ಗೆ ಮಂತ್ರಾಲಯಕ್ಕೆ ಆಗಮಿಸಿ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಬೆಂಕಿಯ ಅನಾಹುತದಿಂದ ಸಚಿವಾಲಯದ ನಾಲ್ಕು, ಐದು ಹಾಗೂ ಆರನೇ ಮಹಡಿಗಳು ಸಂಪೂರ್ಣವಾಗಿ ಹಾಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.