ADVERTISEMENT

ಮಕ್ಕಳ ಹಸ್ತಾಂತರ ಪ್ರಕರಣ: ನಾರ್ವೆಗೆ ಭಾರತೀಯ ತಂಡ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2012, 19:30 IST
Last Updated 19 ಮಾರ್ಚ್ 2012, 19:30 IST

ನವದೆಹಲಿ (ಐಎಎನ್‌ಎಸ್) :  ನಾರ್ವೆಯ ಮಕ್ಕಳ ಕಲ್ಯಾಣ ಸೇವಾ ವಿಭಾಗದಲ್ಲಿರುವ ಅನಿವಾಸಿ ಭಾರತೀಯರ ಇಬ್ಬರು ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತದ ಇಬ್ಬರು ಹಿರಿಯ ಅಧಿಕಾರಿಗಳು ನಾರ್ವೆಗೆ ಪ್ರಯಾಣ ಬೆಳೆಸಲಿದ್ದಾರೆ.

ಕಾನೂನು ತಜ್ಞರು ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ತಂಡ ಈ ವಾರದ ಕೊನೆಯಲ್ಲಿ ನಾರ್ವೆಗೆ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.  ಮಕ್ಕಳನ್ನು ಪೋಷಕರಿಗೆ ಹಿಂದಿರುಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಅಧಿಕಾರಿಗಳ ತಂಡ 23ರಂದು ಅಲ್ಲಿನ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆಯಲ್ಲಿ ಹಾಜರಾಗುವಂತೆ ವಿದೇಶಾಂಗ ಸಚಿವಾಲಯ ಸೂಚಿಸಿದೆ.

ಈ ನಡುವೆ ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಶೀಘ್ರಗೊಳಿಸುವಂತೆ ನಾರ್ವೆ ಅಧಿಕಾರಿಗಳ ಜೊತೆ ಚರ್ಚಿಸಲು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮಧುಸೂದನ್ ಗಣಪತಿಯವರನ್ನು ನಾರ್ವೆಗೆ ಕಳುಹಿಸಲಾಗಿತ್ತು. ಅವರು ವಾಪಸಾದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.