ADVERTISEMENT

ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ?

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 18:35 IST
Last Updated 14 ಸೆಪ್ಟೆಂಬರ್ 2011, 18:35 IST

ನವದೆಹಲಿ (ಪಿಟಿಐ): ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಅಪಮೌಲ್ಯಗೊಂಡಿರುವ ಕಾರಣ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್ ದರವನ್ನು ಲೀಟರ್‌ಗೆ ಮೂರು ರೂಪಾಯಿ ಹೆಚ್ಚಿಸುವ ಸಾಧ್ಯತೆ ಇದೆ.

ಡಾಲರ್ ಎದುರು ರೂಪಾಯಿ ಎರಡು ವರ್ಷದಲ್ಲಿ ಅತ್ಯಂತ ಹೆಚ್ಚು ಅಪಮೌಲ್ಯಗೊಂಡಿರುವ ಕಾರಣ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲಕ್ಕೆ ಹೆಚ್ಚಿನ ಹಣ ಪಾವತಿ ಮಾಡಬೇಕಾಗಿದ್ದು, ಈ ನಷ್ಟವನ್ನು ಸರಿದೂಗಿಸಿಕೊಳ್ಳುವ ನಿಟ್ಟಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ಅನಿವಾರ್ಯ ಎಂದು ತೈಲ ಕಂಪೆನಿಗಳು ಹೇಳುತ್ತಿವೆ.

ತೈಲ ಚಿಲ್ಲರೆ ಮಾರಾಟಗಾರರು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.16 ರೂಪಾಯಿ ನಷ್ಟ ಅನುಭವಿಸುತ್ತಿದ್ದು, ದಿನಕ್ಕೆ 15 ಕೋಟಿ ರೂಪಾಯಿ ನಷ್ಟ ಸಂಭವಿಸುತ್ತಿದೆ. ಹಾಗಾಗಿ ನಷ್ಟ ಸರಿದೂಗಿಸಿಕೊಳ್ಳಲು ಪುನಃ ಪೆಟ್ರೋಲ್ ದರ ಏರಿಕೆಗೆ ತೈಲ ಕಂಪೆನಿಗಳು ಮುಂದಾಗಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.