ಪಣಜಿ, (ಪಿಟಿಐ): ಬಿಜೆಪಿಯ ಮನೋಹರ್ ಪರಿಕ್ಕರ್ ಗೋವಾದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಆರು ಜನ ಶಾಸಕರು ನೂತನ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು.
ಇಲ್ಲಿನ ಕ್ರೀಡಾ ಪ್ರಾಧಿಕಾರದ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್. ಅಡ್ವಾಣಿ ಹಾಗೂ ಸುಷ್ಮಾ ಸ್ವಾರಾಜ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಮುಂದೆ ರಾಜ್ಯ ಬಜೆಟ್ ಮಂಡನೆಯ ನಂತರ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.