
ಪ್ರಜಾವಾಣಿ ವಾರ್ತೆಕೋಲ್ಕತ್ತ (ಐಎಎನ್‌ಎಸ್): ಪಶ್ಚಿಮ ಬಂಗಾಳ ವಿಧಾನಸಭೆಯ ಉಪಚುನಾವಣೆಗೆ ದಕ್ಷಿಣ ಕೋಲ್ಕತ್ತದ ಭವಾನಿಪುರ್ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಸೆಪ್ಟೆಂಬರ್ 25ರಂದು ನಡೆಯಲಿದೆ. ಭವಾನಿಪುರ್ ವಿಧಾನಸಭಾ ಕ್ಷೇತ್ರವು ಮಮತಾ ಬ್ಯಾನರ್ಜಿ ಅವರು 2009ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ವಿಜಯ ಸಾಧಿಸಿದ್ದ ದಕ್ಷಿಣ ಕೋಲ್ಕತ್ತ ಕ್ಷೇತ್ರಕ್ಕೆ ಒಳಪಡುತ್ತದೆ.
ಕ್ಷೇತ್ರದಾದ್ಯಂತ ರ‌್ಯಾಲಿ ನಡೆಸಿದ ಕಾರ್ಯಕರ್ತರು, ಮಮತಾ ಬ್ಯಾನರ್ಜಿ ಅವರಿಗೆ ಮತ ನೀಡುವಂತೆ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.