ಕೋಲ್ಕತ್ತ, (ಪಿಟಿಐ): ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ತಮ್ಮ ಪಕ್ಷ (ತೃಣಮೂಲ ಕಾಂಗ್ರೆಸ್) ಬಹುಮತ ಗಳಿಸಿದಲ್ಲಿ ಆರು ತಿಂಗಳ ಒಳಗಾಗಿ ಚುನಾವಣೆಗೆ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲೇಬೇಕು ಎಂಬ ಕಡ್ಡಾಯ ನಿಯಮವೇನೂ ಇಲ್ಲ. ಸ್ಪರ್ಧಿಸದಿದ್ದರೂ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ದೆಹಲಿಗೆ ಹೊರಡುವ ಮುನ್ನ ತಮ್ಮ ನಿವಾಸದಲ್ಲಿ ಮಮತಾ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಸದ್ಯ ತಮ್ಮ ಕೆಲಸದ ಮೇಲೆ ತಮ್ಮ ಸಂಪೂರ್ಣ ಗಮನವನ್ನು ಕೇಂದ್ರೀಕರಿಸಿದ್ದು ತಮಗೆ ವಹಿಸಿರುವ ರೈಲ್ವೆ ಇಲಾಖೆಯ ಸಚಿವ ಸ್ಥಾನದ ಹೊಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವೆ ಎಂದರು. ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ ಎಂದು ಅವರು ಈ ಮೊದಲು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.