ADVERTISEMENT

ಮಲ್ಯ ವಿರುದ್ಧ ಹೊಸ ಆರೋಪಪಟ್ಟಿ

ಪಿಟಿಐ
Published 17 ಜೂನ್ 2018, 17:32 IST
Last Updated 17 ಜೂನ್ 2018, 17:32 IST
ವಿಜಯ್‌ ಮಲ್ಯ
ವಿಜಯ್‌ ಮಲ್ಯ   

ನವದೆಹಲಿ: ಸಾಲದ ಸುಳಿಗೆ ಸಿಲುಕಿರುವ ಉದ್ಯಮಿ ವಿಜಯ್‌ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಅಕ್ರಮ ಹಣ ವರ್ಗಾವಣೆ ಮತ್ತು ಬ್ಯಾಂಕ್‌ಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶೀಘ್ರದಲ್ಲಿ ಮಲ್ಯ ಮತ್ತು ಅವರ ಒಡೆತನದ ಕಂಪನಿಗಳ ವಿರುದ್ಧ ನ್ಯಾಯಾಲಯಕ್ಕೆ ಹೊಸ ಆರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಈ ಆರೋಪಪಟ್ಟಿ ಸಲ್ಲಿಸುವುದರೊಂದಿಗೆ ಮಲ್ಯ ಅವರಿಗೆ ಸೇರಿದ ₹9,000 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತಕ್ಷಣಕ್ಕೆ ಅನುಮತಿ ಕೋರುವ ಸಾಧ್ಯತೆ ಇದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಸದ್ಯ ಲಂಡನ್‌ನಲ್ಲಿರುವ ಮಲ್ಯ ವಿರುದ್ಧ ಕಳೆದ ವರ್ಷ ಜಾರಿ ನಿರ್ದೇಶನಾಲಯ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.