
ಪ್ರಜಾವಾಣಿ ವಾರ್ತೆಬೆಂಗಳೂರು: ಅಕಾಲಿಕ ಮಳೆಯಿಂದ ಸುಮಾರು ₨ 700 ಕೋಟಿ ಮೊತ್ತದ ಬೆಳೆ ಹಾಳಾಗಿದ್ದು, ಹಣಕಾಸಿನ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಪತ್ರ ಬರೆಯಲಿದೆ.
ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ತಕ್ಷಣ ಪರಿಹಾರ ನೀಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಲಿದೆ.
ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗಿ ದ್ರಾಕ್ಷಿ, ದಾಳಿಂಬೆ, ಸೇರಿದಂತೆ ಇತರ ಬೆಳೆಗಳು ಹಾಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.