ADVERTISEMENT

ಮಹಾಪಾತ್ರ ಮೇಲೆ ಹಲ್ಲೆ ನಡೆಸಿದವರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2012, 11:30 IST
Last Updated 14 ಏಪ್ರಿಲ್ 2012, 11:30 IST

ಕೋಲ್ಕೋತ್ತಾ (ಐಎಎನ್‌ಎಸ್): ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅವಮಾನಕಾರಿ ವ್ಯಂಗಚಿತ್ರವನ್ನು ಪ್ರಸಾರ ಮಾಡಿದ ಆರೋಪ ಹೊತ್ತ ಜಾದವಪುರ ವಿಶ್ವವಿದ್ಯಾನಿಲಯದ ಉಪನ್ಯಾಸಕ ಅಂಬಿಷೇಕ್ ಮಹಾಪಾತ್ರ  ಅವರ ಮೇಲೆ ಹಲ್ಲೆ ನಡೆಸಿದ ತೃಣಮೂಲ ಕಾಂಗ್ರೆಸ್‌ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದರು. ನಂತರ ಕೆಲವೇ ಗಂಟೆಗಳಲ್ಲಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಮಹಾಪಾತ್ರ ಅವರು ನೀಡಿದ ದೂರಿನ ಮೇರೆಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿತು.

ಮಹಾಪಾತ್ರ ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ ಕ್ರಮವೂ ಕೂಡ ವ್ಯಾಪಕ ಖಂಡನೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರಾದ ಒ.ಪಿ ಮಿಶ್ರಾ ಅವರು ಇದೊಂದು ನ್ಯಾಯದ ಅಣಕು ಎಂದು ಜರಿದಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.