ADVERTISEMENT

ಮಹಾರಾಷ್ಟ್ರ: ಆಲಿಕಲ್ಲು ಮಳೆಗೆ ಬೆಳೆ ನಷ್ಟ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ಮುಂಬೈ(ಪಿಟಿಐ):  ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿ­­ಕಲ್ಲು ಬಿದ್ದು 8 ಲಕ್ಷ ಹೆಕ್ಟೇರ್‌ಗೂ ಅಧಿಕ ಜಾಗದಲ್ಲಿ ಬೆಳೆನಾಶ ಸಂಭವಿಸಿದೆ ಎಂದು ಮಹಾರಾಷ್ಟ್ರ ಸಿ.ಎಂ ಪೃಥ್ವಿರಾಜ್‌ ಚೌಹಾಣ್‌ ಸೋಮವಾರ ಹೇಳಿದ್ದಾರೆ.

ಆಲಿಕಲ್ಲಿನಿಂದಾಗಿ ದ್ರಾಕ್ಷಿ, ಸಾಸಿವೆ ಹಾಗೂ ತರಕಾರಿ ಬೆಳೆಗೆ ಹಾನಿಯಾಗಿದೆ.  ಈ  ಸಂಬಂಧ  ಪ್ರಧಾನಿ ಮನಮೋಹನ ಸಿಂಗ್‌ ಮತ್ತು ಕೃಷಿ ಸಚಿವ ಶರದ್‌ ಪವಾರ್‌ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಬೆಳೆಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಬೆಳೆಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಇದಕ್ಕೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗ ಲಾರದು ಎಂದು ವಿವರಿಸಿದ್ದಾರೆ. ಇನ್ನು ಮೂರು ದಿನಗಳಲ್ಲಿ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.