ADVERTISEMENT

ಮಹಾರಾಷ್ಟ್ರ: ಸಚಿವಾಲಯದಲ್ಲಿ ಭಾರಿ ಅಗ್ನಿ ಅನಾಹುತ

​ಪ್ರಜಾವಾಣಿ ವಾರ್ತೆ
Published 21 ಜೂನ್ 2012, 10:50 IST
Last Updated 21 ಜೂನ್ 2012, 10:50 IST

ಮುಂಬೈ (ಪಿಟಿಐ): ದಕ್ಷಿಣ ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಮಂತ್ರಾಲಯ (ಸಚಿವಾಲಯ) ಕಟ್ಟಡದ ನಾಲ್ಕನೇಯ ಮಹಡಿಯಲ್ಲಿ ಗುರುವಾರ ಮಧ್ಯಾಹ್ನ ಭಾರಿ ಪ್ರಮಾಣದ ಅಗ್ನಿ ಅನಾಹುತ ಉಂಟಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
 
ನಾಲ್ಕನೇಯ ಮಹಡಿಯಲ್ಲಿರುವ ಎನ್‌ಸಿಪಿ ಸಚಿವ ಬಬನ್‌ರಾವ್ ಪಚೆಪುಟೆ ಅವರ ಕಚೇರಿಯಲ್ಲಿ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿಯು ಕಟ್ಟಡವನ್ನು ವ್ಯಾಪಕವಾಗಿ ಆವರಿಸಿಕೊಂಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ಆರು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಇವರೆಗೆ ಯಾವುದೇ ಜೀವಹಾನಿಯಾದ ವರದಿಯಾಗಿಲ್ಲ.

ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಅವರು ಬೆಂಕಿಗೆ ಆಹುತಿಯಾಗಿರುವ ಕಟ್ಟಡದೊಳಗಿರುವ ಕಡತಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಆದೇಶಿಸಿದ್ದಾರೆ.

ಈ ಮಧ್ಯೆ ಸಚಿವ ಪಚೆಪುಟೆ ಅವರು ಬೆಂಕಿಯು ಆರು ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿವರೆಗೆ ಆವರಿಸಿಕೊಂಡಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.