ಅಜಂಗಡ (ಪಿಟಿಐ): ಮಾಜಿ ಶಾಸಕ ಹಾಗೂ ಬಿಎಸ್‌ಪಿ ಮುಖಂಡ ಸರ್ವೇಶ್ ಸಿಂಗ್ ಸೀಪು (35) ಅವರನ್ನು ಅಪರಿಚಿತರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.
ಘಟನೆಯಲ್ಲಿ ಸರ್ವೇಶ್ ಸಿಂಗ್ ಜತೆ ನರದ್ ರೈ (40) ಎಂಬುವವರನ್ನೂ ಹತ್ಯೆ ಮಾಡಲಾಗಿದೆ. ಘಟನೆ ನಂತರ ಸೀಪು ಅವರ ಬೆಂಬಲಿಗರು ನಡೆಸಿದ ಹಿಂಸಾಚಾರದಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ. ಗಲಭೆ ನಿಯಂತ್ರಿಸಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾರಿಸಿದ ಗುಂಡಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ.
ಸೀಪು ಬೆಂಬಲಿಗರು ಇಲ್ಲಿನ ಜಿಯಾನ್‌ಪುರ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದರು. ಪೊಲೀಸರಿಂದ ಬಂದೂಕು ಕಿತ್ತುಕೊಂಡು, ಕಲ್ಲು ತೂರಾಟ ನಡೆಸಿ, ಠಾಣೆಗೆ ಬೆಂಕಿ ಹಚ್ಚಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.