
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಗಗನಸಖಿ ಗೀತಿಕಾ ಶರ್ಮಾ (23) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪಿ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಜಾಮೀನು ಕೋರಿ ಕಾಂಡಾ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಯಶವಂತ್ ಕುಮಾರ್, ₨ 5 ಲಕ್ಷದ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಇಬ್ಬರು ಸಾಕ್ಷಿಗಳ ಭದ್ರತೆಯಲ್ಲಿ ಜಾಮೀನು ನೀಡಿದರು. ಅನುಮತಿ ಇಲ್ಲದೆ ದೆಹಲಿ ಬಿಟ್ಟು ಹೋಗಬಾರದು ಎಂದು ಹೇಳಿದ ಕೋರ್ಟ್, ತಮ್ಮ ಪಾಸ್‌ಪೋರ್ಟ್ ಒಪ್ಪಿಸುವಂತೆ ಕಾಂಡಾ ಅವರಿಗೆ ಸೂಚಿಸಿತು. 18 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಕಾಂಡಾ, ತಮ್ಮ ಅಸ್ವಸ್ಥ ಪತ್ನಿಯನ್ನು ನೋಡಿಕೊಳ್ಳುವ ಸಲುವಾಗಿ ಜಾಮೀನು ಕೋರಿ ಫೆ. 17ರಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.