ADVERTISEMENT

ಮಾಜಿ ಸಚಿವ ರಾಜಾ ಆಪ್ತ ಕಾರ್ಯದರ್ಶಿಗೆ ಹೈಕೋರ್ಟ್ ದಂಡ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2012, 19:30 IST
Last Updated 1 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ):  ಕ್ಷುಲ್ಲಕ ಮನವಿ ಸಲ್ಲಿಸಿದ್ದಕ್ಕಾಗಿ 2ಜಿ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಎ. ರಾಜಾ ಅವರ ಆಪ್ತ ಕಾರ್ಯದರ್ಶಿ ಆರ್.ಕೆ. ಚಂದೋಲಿಯಾ ಅವರಿಗೆ ದೆಹಲಿ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

2ಜಿ ಹಗರಣದಲ್ಲಿ ಸಾಕ್ಷಿಯಾಗಿರುವವರನ್ನು ವಿಚಾರಣಾ ನ್ಯಾಯಾಲಯದಲ್ಲಿ ಪಾಟೀ ಸವಾಲಿಗೆ ಒಳಪಡಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯದಿಂದ ದಾಖಲೆ ಪತ್ರಗಳನ್ನು ತರಿಸಬೇಕು ಎಂದು ಚಂದೋಲಿಯಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಲ್. ಮೆಹ್ತಾ, ಇದು ಕ್ಷುಲ್ಲಕ ಅರ್ಜಿ. ವಿಚಾರಣೆ ವಿಳಂಬಗೊಳಿಸುವ ಉದ್ದೇಶದಿಂದ ಮಾತ್ರ ಸಲ್ಲಿಸಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. ಚಂದೋಲಿಯಾ ಮೇಲೆ 25 ಸಾವಿರ ದಂಡ ವಿಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.