ADVERTISEMENT

‘ಮಾಜಿ ಸಿ.ಎಂ.ಗಳಿಗೆ ಸರ್ಕಾರಿ ಬಂಗಲೆಯಲ್ಲಿ ವಾಸಕ್ಕೆ ಅವಕಾಶ ಇಲ್ಲ’

ಪಿಟಿಐ
Published 7 ಮೇ 2018, 20:14 IST
Last Updated 7 ಮೇ 2018, 20:14 IST
‘ಮಾಜಿ ಸಿ.ಎಂ.ಗಳಿಗೆ ಸರ್ಕಾರಿ ಬಂಗಲೆಯಲ್ಲಿ ವಾಸಕ್ಕೆ ಅವಕಾಶ ಇಲ್ಲ’
‘ಮಾಜಿ ಸಿ.ಎಂ.ಗಳಿಗೆ ಸರ್ಕಾರಿ ಬಂಗಲೆಯಲ್ಲಿ ವಾಸಕ್ಕೆ ಅವಕಾಶ ಇಲ್ಲ’   

ನವದೆಹಲಿ: ಅಧಿಕಾರ ಅವಧಿ ಮುಗಿದ ನಂತರವೂ ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ವಸತಿಗೃಹಗಳಲ್ಲಿ ವಾಸ ಮಾಡಲು ಅವಕಾಶ ಕಲ್ಪಿಸಿ ಉತ್ತರ ಪ್ರದೇಶ ಸರ್ಕಾರ ಕಾನೂನಿಗೆ ತಂದಿದ್ದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ.

ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಲೋಕ್‌ ಪ್ರಹಾರಿ ಎಂಬ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್‌ ಗೋಗೊಯ್ ನೇತೃತ್ವದ ಪೀಠ, ‘ಈ ತಿದ್ದುಪಡಿ ಸೇಚ್ಛಾಚಾರ, ತಾರತಮ್ಯದಿಂದ ಕೂಡಿದೆ. ಅಲ್ಲದೇ, ಇದು ಸಮಾನತೆ ಪ್ರತಿಪಾದಿಸುವ ಸಂವಿಧಾನದ ಆಶಯಕ್ಕೆ ವಿರುದ್ಧವಾದುದು’ ಎಂದು ಸೋಮವಾರ ನೀಡಿದ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

‘ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿ ಆ ಸ್ಥಾನದಿಂದ ಕೆಳಗಿಳಿದ ನಂತರ ಸಾಮಾನ್ಯ ಜನತೆಗೂ ಆ ವ್ಯಕ್ತಿಗೂ ಯಾವುದೇ ವ್ಯತ್ಯಾಸ ಇರುವುದಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.