
ಪ್ರಜಾವಾಣಿ ವಾರ್ತೆಮುಂಬೈ, (ಪಿಟಿಐ): 2006ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿಯನ್ನು ನ. 4ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳವು (ನಿಯಾ) ಸೋಮವಾರ ಮೋಕಾ ನ್ಯಾಯಾಲಯಕ್ಕೆ ತಿಳಿಸಿದೆ.
ಇದರೊಂದಿಗೆ ಒಂಬತ್ತು ಜನ ಆರೋಪಿಗಳ ಜಾಮೀನು ಮನವಿಯ ಅರ್ಜಿಗೆ ಸಂಬಂಧಿಸಿದಂತೆ ಮೋಕಾ ನ್ಯಾಯಾಲಯಕ್ಕೆ ಅದೇ ದಿನ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ರಾಷ್ಟ್ರೀಯ ತನಿಖಾ ದಳ (ನಿಯಾ) ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಸೋಮವಾರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವೈ.ಡಿ. ಶಿಂದೆ ಅವರ ಮುಂದೆ ಹಾಜರು ಪಡಿಸಲಾಯಿತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರು ನ.19ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.