ಬಲ್ಲಿಯಾ (ಉತ್ತರ ಪ್ರದೇಶ) (ಪಿಟಿಐ): ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ನಿವೃತ್ತ ಮೇಜರ್ ರಮೇಶ ಉಪಾಧ್ಯಾಯ, ಬೈರಿಯಾ ಕ್ಷೇತ್ರದಿಂದ ಸ್ಪರ್ಧಿಸಲು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
60 ವರ್ಷದ ಉಪಾಧ್ಯಾಯ ಸದ್ಯ ಮಹಾರಾಷ್ಟ್ರದ ರಾಯಗಡದ ತಲೋಜಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಅವರು ತಮ್ಮ ಪುತ್ರ ವಿಶಾಲ್ ಉಪಾಧ್ಯಾಯ ಅವರ ಮೂಲಕ ನಾಮಪತ್ರ ಸಲ್ಲಿಸಿದ್ದು, ಅಖಿಲ ಭಾರತ ಹಿಂದೂ ಮಹಾಸಭಾದ ಟಿಕೆಟ್ ಮೇಲೆ ಚುನಾವಣೆ ಎದುರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.